Home Local ಸ್ವಾಮಿ ನಿರ್ಭಯಾನಂದ ಸರಸ್ವತಿಯವರಿಗೆ ಗೋಕರ್ಣ ಗೌರವ

ಸ್ವಾಮಿ ನಿರ್ಭಯಾನಂದ ಸರಸ್ವತಿಯವರಿಗೆ ಗೋಕರ್ಣ ಗೌರವ

SHARE

ಗೋಕರ್ಣ: ಪ ಪೂ ಸ್ವಾಮಿ ನಿರ್ಭಯಾನಂದ ಸರಸ್ವತಿ , ಅಧ್ಯಕ್ಷರು – ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮ, ಗದಗ, ವಿಜಯಪುರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಮಹರ್ಷಿ ದೈವರಾತರ ಪುತ್ರ ಶ್ರೀ ದೇವಶ್ರವ ಶರ್ಮಾ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಪ ಪೂ ಶ್ರೀ ಶ್ರೀ ಕೃತಾರ್ಥಾನಂದ ಸ್ವಾಮೀಜಿ ಇವರು ಉಪಸ್ಥಿತರಿದ್ದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ ರಾಮಚಂದ್ರ ಜಂಭೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .