Home Information ವಸತಿ ಶಾಲೆಗಳಲ್ಲಿ ಅರ್ಜಿ ಆಹ್ವಾನ

ವಸತಿ ಶಾಲೆಗಳಲ್ಲಿ ಅರ್ಜಿ ಆಹ್ವಾನ

SHARE

ಶಿರಸಿ: 2018-19 ನೇ ಸಾಲಿನ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ||ಬಿ. ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6 ರಿಂದ 10 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಾಂಗ ಮಾಡಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದ ಪ್ರವರ್ಗ-1 ರ ವಿದ್ಯಾರ್ಥಿಗಳ ಕುಟುಂಬದವರ ವಾರ್ಷಿಕ ಆದಾಯ 2.50 ಲಕ್ಷ ಮೀರಿರಬಾರದು ಹಾಗೂ ಪ್ರವರ್ಗ 2 ಎ, 2ಬಿ, 3 ಎ, ವಿದ್ಯಾರ್ಥಿಗಳ ವಾರ್ಷಿಕ ಆದಾಯ 1 ಲಕ್ಷ ಮೀರಿರಬಾರದು.

ಅರ್ಜಿಗಳನ್ನು ಜಿಲ್ಲೆಯ ಎಲ್ಲಾ ವಸತಿ ಶಾಲೆಗಳಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿ, ಬಿ. ಆರ್. ಸಿ. ಕಛೇರಿಗಳಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಯಾ ತಾಲೂಕಿನ ವಸತಿ ಶಾಲೆಗಳಲ್ಲಿ ದಿನಾಂಕ 13-1-2018 ಸಂಜೆ 5 ಗಂಟೆ ಒಳಗೆ ಸಲ್ಲಿಸಬಹುದು.