Home Important ವೀರವನಿತೆ ಆಗುತ್ತಿದ್ದಾರೆ ಸನ್ನಿ ಲಿಯೋನ್ !

ವೀರವನಿತೆ ಆಗುತ್ತಿದ್ದಾರೆ ಸನ್ನಿ ಲಿಯೋನ್ !

SHARE

ಸನ್ನಿ ಲಿಯೋನ್ ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದರಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

ದಕ್ಷಿಣ ಭಾರತದ ಐತಿಹಾಸಿಕ ಕಥೆಯನ್ನಾಧರಿಸಿದ ಚಿತ್ರಕ್ಕೆ ಸನ್ನಿ ಲಿಯೋನ್ ನಾಯಕಿ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ವೀರವನಿತೆ ವೀರಮಾದೇವಿ ಪಾತ್ರದಲ್ಲಿ ಸನ್ನಿ ಕಾಣಿಸಿಕೊಳ್ಳಲಿದ್ದಾರೆ. ಈ ಬಹು ನಿರೀಕ್ಷಿತ ಚಿತ್ರವು ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇನ್ನು ಈ ಚಿತ್ರಕ್ಕೆ ನಿರ್ದೇಶಕ ವಡಿವುಡೈಯಾನ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರಕ್ಕಾಗಿ ಸನ್ನಿ ಬರೊಬ್ಬರಿ 150 ದಿನಗಳ ಕಾಲ್ ಶೀಟ್ ನೀಡಿದ್ದಾರಂತೆ. ಈ ಚಿತ್ರದಲ್ಲಿ ನಟಿ ಸನ್ನಿ ಲಿಯೋನ್ ವೀರವನಿತೆಯಾಗಿ ಕಾಣಿಸಿಕೊಳ್ಳುತ್ತಿದ್ದು, ಇದಕ್ಕಾಗಿ ಮಾರ್ಷಲ್ ಆರ್ಟ್ಸ್, ಕತ್ತಿ ವರಸೆ ಮತ್ತು ಕುದುರೆ ಸವಾರಿ ಕಲಿಯುತ್ತಿದ್ದಾರಂತೆ.

ಜನವರಿ ತಿಂಗಳಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುವ ಸಾಧ್ಯತೆ ಇದ್ದು, ಚಿತ್ರಕ್ಕಾಗಿ ಬೃಹತ್ ಅರಮನೆ ಮತ್ತು ರಣಾಂಗಣದ ಸೆಟ್ ಗಳನ್ನು ನಿರ್ಮಿಸಲಾಗುತ್ತಿದೆ