Home Local ಮುಂಡಗೋಡದಲ್ಲಿ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಮುಂಡಗೋಡದಲ್ಲಿ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

SHARE

ಮುಂಡಗೋಡ : ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಕೆಂಚಿಕೊಪ್ಪ ಗ್ರಾಮದ ಪೂರ್ಣೀಮಾ ಎಸ್.ನಾಯ್ಕ್(18) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ.

ಮನೆಯಲ್ಲಿ ಕುಟುಂಬಸ್ಥರು ಮನೆಗೆಲಸ ಮಾಡು ಎಂದು ಬುದ್ದಿವಾದ ಹೇಳಿದ್ದಕ್ಕೆ ಕೋಪಗೊಂಡು ತೋಟದ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಆದರೆ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.

ಘಟನೆಗೆ ಸಂಬಂದಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ