Home Local ಹನುಮಂತ ಬೆಣ್ಣೆ ಸರಕಾರಿ ಪದವಿ ಪೂರ್ವ ಕಾಲೇಜು ನೆಲ್ಲಿಕೇರಿಯಲ್ಲಿ ವಾರ್ಷಿಕೋತ್ಸವ ಸಂಭ್ರಮ

ಹನುಮಂತ ಬೆಣ್ಣೆ ಸರಕಾರಿ ಪದವಿ ಪೂರ್ವ ಕಾಲೇಜು ನೆಲ್ಲಿಕೇರಿಯಲ್ಲಿ ವಾರ್ಷಿಕೋತ್ಸವ ಸಂಭ್ರಮ

SHARE

ಕುಮಟಾ :ತಾಲೂಕಿನ ಹನುಮಂತ ಬೆಣ್ಣೆ ಸರಕಾರಿ ಪದವಿ ಪೂರ್ವ ಕಾಲೇಜು ನೆಲ್ಲಿಕೇರಿ, ಕುಮಟಾ.(ಉ.ಕ) ಇದರ “2017-18 ನೇ ಸಾಲಿನ ವಾರ್ಷಿಕೋತ್ಸವ” ಕಾರ್ಯಕ್ರಮ ನಡೆಯಿತು.

ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಉದ್ಘಾಟಕರ ನುಡಿಗಳನ್ನಾಡಿದ ಶಾಸಕರು ಇಂದಿನ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ‌ಮಾಡಬೇಕು, ಸ್ಪರ್ಧಾತ್ಮಕ ಯುಗಕ್ಕೆ ಸಿದ್ಧರಾಗಬೇಕು ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ವಿದ್ಯಾರ್ಥಿ ಹಾಗೂ ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.