Home Local “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ಅಭಿನವ ರುದ್ರ ಮಲ್ಲಿಕಾರ್ಜುನ ಶಿವಾಚಾರ್ಯರು

“ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ಅಭಿನವ ರುದ್ರ ಮಲ್ಲಿಕಾರ್ಜುನ ಶಿವಾಚಾರ್ಯರು

SHARE

ಗೋಕರ್ಣ ; ಪ ಪೂ ಶ್ರೀ ಶ್ರೀ ಅಭಿನವ ರುದ್ರ ಮಲ್ಲಿಕಾರ್ಜುನ ಶಿವಾಚಾರ್ಯರು , ಬಣ್ಣದಮಠ , ಹಾವೇರಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ ರಾಮಚಂದ್ರ ಜಂಭೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .