Home Local ಶ್ರೀ ಮರುಳಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳಿಗೆ ಗೋಕರ್ಣ ಗೌರವ

ಶ್ರೀ ಮರುಳಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳಿಗೆ ಗೋಕರ್ಣ ಗೌರವ

SHARE

ಗೋಕರ್ಣ : ಪ ಪೂ ಶ್ರೀ ಶ್ರೀ ಮರುಳಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು, ಹಿರೇಮಠ , ಬಾದಾಮಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ವೇ. ವಿನಾಯಕ ಸಾಂಬಾ ಭಟ್ ಷಡಕ್ಷರಿ ಹಿರೇಗಂಗೆ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ ವಿಶ್ವನಾಥ ಭಟ್ ಬಾಳೆಹಿತ್ಲು ಇವರು ಪೂಜಾ ಕೈಂಕರ್ಯ ನೆರವೇರಿಸಿದರು .