Home Local ಶ್ರೀ ಚನ್ನಬಸಯ್ಯ ಸ್ವಾಮಿಗಳಿಗೆ ಸಂದಿತು ಗೋಕರ್ಣ ಗೌರವ

ಶ್ರೀ ಚನ್ನಬಸಯ್ಯ ಸ್ವಾಮಿಗಳಿಗೆ ಸಂದಿತು ಗೋಕರ್ಣ ಗೌರವ

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಚನ್ನಬಸಯ್ಯ ಸ್ವಾಮಿಗಳು , ಮಹದೇವಮಠ, ಜಮಖಂಡಿ , ಬಾಗಲಕೋಟ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 369 ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಕಾರ್ಯಕರ್ತ ಶ್ರೀ ಅರುಣ ಹೆಗಡೆ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ. ವಿಶ್ವನಾಥ ಭಟ್ ಬಾಳೆಹಿತ್ಲು ಇವರು ಪೂಜಾ ಕೈಂಕರ್ಯ ನೆರವೇರಿಸಿದರು .