Home Local ಶ್ರೀ ಶ್ರೀ ಶಂಭುಲಿಂಗೇಶ್ವರ ಸ್ವಾಮೀಜಿಗಳಿಗೆ ಗೋಕರ್ಣ ಗೌರವ

ಶ್ರೀ ಶ್ರೀ ಶಂಭುಲಿಂಗೇಶ್ವರ ಸ್ವಾಮೀಜಿಗಳಿಗೆ ಗೋಕರ್ಣ ಗೌರವ

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಶಂಭುಲಿಂಗೇಶ್ವರ ಸ್ವಾಮೀಜಿ , ಹಣಕಡಬೂರು ಗದ್ದುಗೆಮಠ , ಕನಕಪುರ, ರಾಮನಗರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 371ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಹಿರಿಯ ಸಾಮಾಜಿಕ ಕಾರ್ಯಕರ್ತ, ಉದ್ಯಮಿಗಳೂ ಆದ ಶ್ರೀ ಜಯರಾಮ ಶಿವಮೊಗ್ಗ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ನ್ಯಾಯವಾದಿಗಳಾದ ಶ್ರೀ ನಾಗರಾಜ ನಾಯಕ ಕಾರವಾರ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ ಮಹಾಬಲೇಶ್ವರ ಮಾರಿಗೋಳಿ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .