Home Local ಹನೆಹಳ್ಳಿ ಗ್ರಾಮದ ಗ್ರಾಮೀಣ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಹವಾನಿಯಂತ್ರಿತ ಕಟ್ಟಡ ಉದ್ಘಾಟನೆ.

ಹನೆಹಳ್ಳಿ ಗ್ರಾಮದ ಗ್ರಾಮೀಣ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಹವಾನಿಯಂತ್ರಿತ ಕಟ್ಟಡ ಉದ್ಘಾಟನೆ.

SHARE

ಕುಮಟಾ : ತಾಲೂಕಿನ ಹನೆಹಳ್ಳಿ ಗ್ರಾಮದ ಗ್ರಾಮೀಣ ವ್ಯವಸಾಯ ಸೇವಾ ಸಹಕಾರ ಸಂಘ(ರಿ) ಇದರ ನೂತನ ಹವಾನಿಯಂತ್ರಿತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಈ ವ್ಯವಸಾಯ ಸೇವಾ ಸಹಕಾರಿ ಸಂಘವು ಅಭಿವೃದ್ಧಿ ಹೊಂದಲಿ ಎಂದು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹನೆಹಳ್ಳಿ ಗ್ರಾಮದ ಗ್ರಾಮೀಣ ವ್ಯವಸಾಯ ಸೇವಾ ಸಹಕಾರ ಸಂಘ(ರಿ) ಇದರ ಅಧ್ಯಕ್ಷರು,ಸದಸ್ಯರು ಹಾಗೂ ಊರಿನ ಪ್ರಮುಖರು ಭಾಗವಹಿಸಿದ್ದರು.