Home Local “ಗೋಕರ್ಣ ಗೌರವ” 391ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ವಿಶ್ವನಾಥ ಮಹಾಸ್ವಾಮಿಗಳು

“ಗೋಕರ್ಣ ಗೌರವ” 391ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ವಿಶ್ವನಾಥ ಮಹಾಸ್ವಾಮಿಗಳು

SHARE

ಗೋಕರ್ಣ- ಪ ಪೂ ಶ್ರೀ ಶ್ರೀ ವಿಶ್ವನಾಥ ಮಹಾಸ್ವಾಮಿಗಳು , ಬೂದೇಶ್ವರ ಮಠ, ಗದಗ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 391ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಶ್ರೀ ರೋಹಿದಾಸ ಜನ್ನು ಹನೇಹಳ್ಳಿ – ದಂಪತಿಗಳು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .