Home Local ಮಾತಾಜಿ ಕಾತ್ಯಾಯಿನಿ ತಾಯಿಯವರಿಗೆ ಗೋಕರ್ಣ ಗೌರವ.

ಮಾತಾಜಿ ಕಾತ್ಯಾಯಿನಿ ತಾಯಿಯವರಿಗೆ ಗೋಕರ್ಣ ಗೌರವ.

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಮಾತಾಜಿ ಕಾತ್ಯಾಯಿನಿ ತಾಯಿಯವರು, ಸಿದ್ಧಾರೂಢ ಆಶ್ರಮ , ಮುಧೋಳ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 410ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಮಧೂರು ಶ್ರೀ ಮದನಂತೇಶ್ವರ ವಿನಾಯಕ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀಕೃಷ್ಣ ಉಪಾಧ್ಯಾಯ ಇವರ ಪತ್ನಿ ಶ್ರೀಮತಿ ಆಶಾ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .