Home Local ಶ್ರೀ ರೇವಣಸಿದ್ಧ ಮಹಾರಾಜರಿಗೆ ಗೋಕರ್ಣ ಗೌರವ

ಶ್ರೀ ರೇವಣಸಿದ್ಧ ಮಹಾರಾಜರಿಗೆ ಗೋಕರ್ಣ ಗೌರವ

SHARE

ಗೋಕರ್ಣ: ಪ ಪೂ ಶ್ರೀ ಶ್ರೀರೇವಣಸಿದ್ಧ ಮಹಾರಾಜರು , ರೇವಣಸಿದ್ಧ ಮಠ, ಸೊಲ್ಲಾಪುರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 420ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಬೆಂಗಳೂರಿನ ಖಾಸಗಿ ಕಂಪನಿ ವ್ಯವಸ್ಥಾಪಕರಾದ ಶ್ರೀ ಸಂದೇಶ ಶೆಟ್ಟಿ , ಶ್ರೀಮತಿ ರೂಪಾ ಶೆಟ್ಟಿ ದಂಪತಿಗಳು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .