Home Local ಯಲ್ಲಾಪುರದಲ್ಲಿ ಬೆಂಕಿ ತಡೆ ಅಭಿಯಾನಕ್ಕೆ ಶಾಸಕ ಶಿವರಾಮ ಹೆಬ್ಬಾರ ಚಾಲನೆ

ಯಲ್ಲಾಪುರದಲ್ಲಿ ಬೆಂಕಿ ತಡೆ ಅಭಿಯಾನಕ್ಕೆ ಶಾಸಕ ಶಿವರಾಮ ಹೆಬ್ಬಾರ ಚಾಲನೆ

SHARE

ಯಲ್ಲಾಪುರ ; ತಾಲೂಕಿನ ಮಂಚಿಕೇರಿ ವಲಯ ಅರಣ್ಯ ವ್ಯಾಪ್ತಿಯ ಬೊಮ್ಮನಳ್ಳಿ ಗ್ರಾಮದಲ್ಲಿ ಊರ ನಾಗರಿಕರು, ಶಾಲಾ ವಿದ್ಯಾರ್ಥಿಗಳು, ಗ್ರಾಮ ಅರಣ್ಯ ಸಮಿತಿ ಸದಸ್ಯರು. ಚುನಾಯಿತ ಜನಪ್ರತಿನಿಧಿಗಳ ಸಹಯೋಗದಲ್ಲಿ ಅರಣ್ಯ ಇಲಾಖೆ ವತಿಯಿಂದ ಬೆಂಕಿ ತಡೆ ಅಭಿಯಾನಕ್ಕೆ ಶಾಸಕ ಶಿವರಾಮ ಹೆಬ್ಬಾರ ಚಾಲನೆ ನೀಡಿದರು.

ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿನೋದ ತಾಳೆ ಕೆರವಳಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ ಪಿ ಕೆ, ವಲಯ ಅರಣ್ಯ ಅಧಿಕಾರಿ ಶ್ರೀಧರ ತೆಗ್ಗಿನಮನೆ, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ಆಗೇರ ಈ ಸಂದರ್ಭದಲ್ಲಿ ಇದ್ದರು.

ಸ್ವತಃ ಶಾಸಕರು ಪ್ರಾತ್ಯಕ್ಷಿಕೆ ಮೂಲಕ ಬೆಂಕಿಯನ್ನು ಆರಿಸುವುದರ ಕುರಿತು ಜನರಿಗೆ ಮಾಹಿತಿ ನೀಡಿದರು.