Home Important ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲ ಮಹಿಳೆಯರಿಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲ ಮಹಿಳೆಯರಿಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ

SHARE

ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಇದೇ 8ರಂದು ಎಲ್ಲ ಇಂದಿರಾ ಕ್ಯಾಂಟೀನ್‌ಗಳಲ್ಲಿ ಎಲ್ಲ ಮಹಿಳೆಯರಿಗೆ ತಿಂಡಿ ಮತ್ತು ಊಟ ಉಚಿತ ವಿತರಿಸಲಾಗುವುದು ಎಂದು ಮೇಯರ್‌ ಆರ್‌.ಸಂಪತ್‌ ರಾಜ್‌ ತಿಳಿಸಿದರು.

ಪಾಲಿಕೆಯಲ್ಲಿ ಮಂಗಳವಾರ ನಡೆದ ಬಜೆಟ್‌ ಮೇಲಿನ ಚರ್ಚೆಯಲ್ಲಿ ಈ ವಿಷಯ ತಿಳಿಸಿದರು.

ಪಾಲಿಕೆ ಸದಸ್ಯೆಯರಿಗೆ ಮತ್ತು ಮಾಧ್ಯಮದ ಮಹಿಳೆಯರಿಗೆ ಉಚಿತವಾಗಿ ಆಹಾರ ನೀಡಲು ತೀರ್ಮಾನಿಸಿರುವುದಾಗಿ ಮೇಯರ್‌ ಪ್ರಕಟಿಸಿದರು. ಇದಕ್ಕೆ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಎಲ್ಲ ಮಹಿಳೆಯರಿಗೂ ನೀಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಮೇಯರ್‌ ಸ್ಪಂದಿಸಿದರು.