Home Local ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ

ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ

SHARE

ಯಲ್ಲಾಪುರ ; ಪಲ್ಸ್ ಪೋಲಿಯೋ ಕಾರ್ಯಕ್ರಮದ ಎರಡನೇ ಸುತ್ತಿನ ಪಲ್ಸ್ ಪೋಲಿಯೋಗೆ ಶಾಸಕ ಶಿವರಾಮ ಹೆಬ್ಬಾರ ರವಿವಾರ ಬೆಳಿಗ್ಗೆ ತಾಲೂಕ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಯನ್ನು ಹಾಕುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷೆ ಭವ್ಯ ಶೆಟ್ಟಿ, ತಾಲೂಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಮ ಹೆಗಡೆ, ತಾಲೂಕಾ ಆರೋಗ್ಯಾಧಿಕಾರಿ ಡಾ.ಮಂಜುನಾಥ ಆರ್, ಆಸ್ಪತ್ರೆಯ ವೈದ್ಯರಾದ ಡಾ.ದೀಪಕ ಭಟ್, ಡಾ.ಸೌಮ್ಯ ಕೆ.ವಿ, ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಟಿ ಭಟ್ ಸಿಬ್ಬಂದಿಗಳು ಉಪಸ್ಥಿತರಿದ್ದರು.