Home Local ಉತ್ತರ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಉದ್ಘಾಟನೆ.

ಉತ್ತರ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಉದ್ಘಾಟನೆ.

SHARE

ಕುಮಟಾ: ತಾಲೂಕಿನಲ್ಲಿ ನಿರ್ಮಾಣಗೊಂಡ ಉತ್ತರ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ (ರಿ.) ಕುಮಟಾ(ಉ.ಕ.) ಇದರ ನೂತನ ಕಾರ್ಯಾಲಯವನ್ನು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಉದ್ಘಾಟಿಸಿದರು.

ಗಾಣಿಗ ಸಮುದಾಯ ಕಡಿಮೆ‌ಜನಸಂಖ್ಯೆ ಹೊಂದಿದ್ದರೂ ಸುಸಂಸ್ಕ್ರತ ಸಮಾಜವಾಗಿ ಗುರುತಿಸಿಕೊಂಡಿದೆ. ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಅತ್ಯತ್ತಮ ರೀತಿಯಲ್ಲಿ ಸಂಘಟನೆಗೊಂಡಿದೆ, ಸೇವೆ ಹಾಗೂ ಅಭಿವೃದ್ಧಿಗೆ ಇದು ಪ್ರಥಮ ಹೆಜ್ಜೆ ಎಂದು ಅವರು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಆತಿಥ್ಯ ವಹಿಸಿ ಮಾತನಾಡಿದ ಮಾಜಿ ಶಾಸಕರು ಹಾಗೂ ಬಿಜೆಪಿ ಪ್ರಮುಖರಾದ ದಿನಕರ ಶೆಟ್ಟಿ ಸಮುದಾಯ ಅಭಿವೃದ್ಧಿಗೆ ಸಂಘಗಳು ಮಹತ್ವಾದ್ದಾಗಿದ್ದು ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಅತ್ಯತ್ತಮ ಕಾರ್ಯ ನಡೆಸಲಿ ಎಂದರು.

ಇದೇ ಸಂದರ್ಭದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.