Home Local ಗೋಕರ್ಣ ಗೌರವ ಪಡೆದ ಶ್ರೀ ಶ್ರೀ ಸೋಮಲಿಂಗ ಮಹಾರಾಜರು

ಗೋಕರ್ಣ ಗೌರವ ಪಡೆದ ಶ್ರೀ ಶ್ರೀ ಸೋಮಲಿಂಗ ಮಹಾರಾಜರು

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಸೋಮಲಿಂಗ ಮಹಾರಾಜರು, ಅಮೋಘಸಿದ್ಧ ಮಠ, ಸೊಲ್ಲಾಪುರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 429ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಕಾರ್ಯಕರ್ತ ಶ್ರೀ ಮಂಜುನಾಥ ಹೆಗಡೆ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .