Home Local ಬಸವ ವಸತಿ ಯೋಜನೆ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿದ ಶಾಸಕರು.

ಬಸವ ವಸತಿ ಯೋಜನೆ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿದ ಶಾಸಕರು.

SHARE

ಕುಮಟಾ : ತಾಲೂಕಿನ ಗೋಕರ್ಣ ಪಂಚಾಯತ ಸಭಾಂಗಣದಲ್ಲಿ ಗೋಕರ್ಣ, ನಾಡುಮಾಸ್ಕೇರಿ, ಹನೇಹಳ್ಳಿ ಮತ್ತು ತೊರ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸವ ವಸತಿ ಯೋಜನೆ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು
ವಿತರಿಸಲಾಯಿತು.

ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಪಂಚಾಯತ್ ಪ್ರತಿನಿಧಿಗಳ, ಅಧಿಕಾರಿಗಳ ಹಾಗೂ ಊರ ನಾಗರಿಕರ ಉಪಸ್ಥಿತಿಯಲ್ಲಿ ಬಸವ ವಸತಿ ಯೋಜನೆ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದರು.

ಗ್ರಾ. ಪಂ. ಅಧ್ಯಕ್ಷ ಹನೀಫ್ ಸಾಬ್, ಮೋಹನ ನಾಯ್ಕ ಉಪಸ್ಥಿತರಿದ್ದರು.