Home Important ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆ.

ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆ.

SHARE

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆ ಇದೆ.

ಕೇಂದ್ರ ಚುನಾವಣಾ ಆಯೋಗ ಚುನಾವಣೆಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂದು ಸುದ್ದಿಗೋಷ್ಠಿಯನ್ನು ಕರೆದಿದ್ದು, ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ರಾಜ್ಯ ಚುನಾವಣಾ ದಿನಾಂಕವನ್ನು ಪ್ರಕಟಿಸುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದ್ದು, ಈ ಕುರಿತು ಇಂದು ಸ್ಪಷ್ಟ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಚುನಾವಣಾ ದಿನಾಂಕ ಪ್ರಕಟವಾದರೆ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಲಿದೆ ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಬಾಕಿ ಉಳಿದಿರುವ ಫೈಲ್​ಗಳಿಗೆ ಅಂತಿಮ ಮುದ್ರೆ ಹಾಕುವಲ್ಲಿ ಬ್ಯುಸಿಯಾಗಿದ್ದರು.

ಮೇ 28 ರಂದು ಸಿದ್ದರಾಮಯ್ಯ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.