Home Local 165ನೇ ದಿನದ”ಗೋಕರ್ಣ ಗೌರವ”

165ನೇ ದಿನದ”ಗೋಕರ್ಣ ಗೌರವ”

SHARE

ಶ್ರೀ ಷ ಬ್ರ ಡಾ. ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು , ಶ್ರೀ ಸಿದ್ಧಲಿಂಗೇಶ್ವರ ಗದ್ದುಗೆಮಠ , ದಾವಣಗೆರೆ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ದೇವಾಲಯದ ಪರವಾಗಿ ಮೂಲಮಠ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷ ಶ್ರೀ ಆರ್ ಎಸ್ ಹೆಗಡೆ ಹರಗಿ ದಂಪತಿಗಳು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ, ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .