Home Local ಶ್ರೀ ಶ್ರೀನಾಗಾನಂದ ಸ್ವಾಮೀಜಿಯವರಿಗೆ ‘ಗೋಕರ್ಣ ಗೌರವ’

ಶ್ರೀ ಶ್ರೀನಾಗಾನಂದ ಸ್ವಾಮೀಜಿಯವರಿಗೆ ‘ಗೋಕರ್ಣ ಗೌರವ’

SHARE

ಗೋಕರ್ಣ: ಪ ಪೂ ಶ್ರೀ ಶ್ರೀನಾಗಾನಂದ ಸ್ವಾಮೀಜಿ, ಶ್ರೀ ದತ್ತಾವಧೂತ ಆಶ್ರಮ, ಬಳ್ಳಾರಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 453ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .