Home Local ಶ್ರೀ ಶ್ರೀ ಶಿವಾನಂದ ಸ್ವಾಮೀಜಿಗಳಿಗೆ ‘ಗೋಕರ್ಣ ಗೌರವ’

ಶ್ರೀ ಶ್ರೀ ಶಿವಾನಂದ ಸ್ವಾಮೀಜಿಗಳಿಗೆ ‘ಗೋಕರ್ಣ ಗೌರವ’

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಶಿವಾನಂದ ಸ್ವಾಮೀಜಿಗಳು , ಪೂರ್ಣಾನಂದ ಆಶ್ರಮ, ಬೆಳಗಾವಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 458ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಉಪಾಧಿವಂತ ಪುರೋಹಿತರಾದ ವೇ ಗಣಪತಿ ಶಾಸ್ತ್ರೀ ಕೊಡಗಿ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .