Home Local ಯಕ್ಷಋಷಿ ಹೊಸ್ತೋಟ ಮಂಜುನಾಥ ಭಾಗವತ ಇವರ ಮಾರ್ಗದರ್ಶನದಲ್ಲಿ 16ನೇ ವರ್ಷದ ಮಕ್ಕಳ ಯಕ್ಷಗಾನ ತರಬೇತಿ ಶಿಬಿರ...

ಯಕ್ಷಋಷಿ ಹೊಸ್ತೋಟ ಮಂಜುನಾಥ ಭಾಗವತ ಇವರ ಮಾರ್ಗದರ್ಶನದಲ್ಲಿ 16ನೇ ವರ್ಷದ ಮಕ್ಕಳ ಯಕ್ಷಗಾನ ತರಬೇತಿ ಶಿಬಿರ ಏ.15ರಿಂದ

SHARE

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಸ.ಹಿ.ಪ್ರಾ. ಶಾಲೆಯಲ್ಲಿ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ ಇವರು ಯಕ್ಷಋಷಿ ಹೊಸ್ತೋಟ ಮಂಜುನಾಥ ಭಾಗವತ ಇವರ ಮಾರ್ಗದರ್ಶನದಲ್ಲಿ ಆಯೋಜಿಸಿರುವ 16ನೇ ವರ್ಷದ ಮಕ್ಕಳ ಯಕ್ಷಗಾನ ತರಬೇತಿ ಶಿಬಿರ ಏ.15ರಿಂದ ಹದಿನೈದು ದಿನ ಪ್ರತಿನಿತ್ಯ ಬೆಳಗ್ಗೆ 9ರಿಂದ ಆರಂಭಗೊಳ್ಳಲಿದೆ.

ಏ.15ರಂದು ಬೆಳಗ್ಗೆ 9ಕ್ಕೆ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆ ಶಿಬಿರ ಉದ್ಘಾಟಿಸುವರು. ಶಿಬಿರದ ನಿರ್ದೇಶಕ ನರೆಂದ್ರ ಹೆಗಡೆ ಅತ್ತೀಮುರುಡು, ಸಮೂಹದ ಅಧ್ಯಕ್ಷ ಪಿ.ವಿ.ಹೆಗಡೆ ಹೊಸಗದ್ದೆ, ವರ್ತಕ ಅನಂತ ಶಾನಭಾಗ ಹಾಗೂ ಇತರರು ಉಪಸ್ಥಿತರಿರುತ್ತಾರೆ.