Home Local ಯಶಸ್ವಿಯಾದ “ಗೋಕರ್ಣ ಗೌರವ” 464ನೇ ದಿನದ ಕಾರ್ಯಕ್ರಮ

ಯಶಸ್ವಿಯಾದ “ಗೋಕರ್ಣ ಗೌರವ” 464ನೇ ದಿನದ ಕಾರ್ಯಕ್ರಮ

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಬಸವರಾಜ ಸ್ವಾಮಿಗಳು , ಶಿವಾನಂದಮಠ, ಮುಧೋಳ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 464ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಉಪಾಧಿವಂತ ಮಂಡಳದ ಸದಸ್ಯ ವೇ ಮಹಾಬಲೇಶ್ವರ ಭಡ್ತಿ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .