Home Local ಮಾರಿಕಾಂಬೆಗೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದ ಕಾಗೇರಿ

ಮಾರಿಕಾಂಬೆಗೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದ ಕಾಗೇರಿ

SHARE

ಉತ್ತರ ಕನ್ನಡ: ಶಿರಸಿಯಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಮಾರಿಕಾಂಬಾ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ಮೂಲಕ ಹೊರಟ ಕಾಗೇರಿ, ಶಿವಾಜಿ ವೃತ್ತದಲ್ಲಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿದ್ರು. ಕಾಗೇರಿಗೆ ಯಲ್ಲಾಪುರ ಮಾಜಿ ಶಾಸಕ ವಿ.ಎಸ್. ಪಾಟೀಲ್ ಸಾಥ್ ನೀಡಿದರು. ಇನ್ನು ಮೆರವಣಿಗೆಯಲ್ಲಿ ಸುಮಾರು 2000ಕ್ಕೂ ಹೆಚ್ಚು ಜನ ಭಾಗಿಯಾಗಿದ್ರು.

ಎಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಕಾಗೇರಿ, ಈ ಸಲ ಗೆಲುವು ನಮ್ಮದೇ. ಕಾಂಗ್ರೆಸ್ ದುರಾಡಳಿತಕ್ಕೆ ಕೊನೆ ಬೀಳಲಿದೆ. ಜನ ಕಾಂಗ್ರೆಸ್​ಗೆ ತಕ್ಕ ಪಾಠ ಕಲಿಸಲಿದ್ದಾರೆ ಅಂತ ಹೇಳಿದ್ರು.