Home Local ರಾಮಕೃಷ್ಣ ಹೆಗಡೆಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ನಾಮಪತ್ರ ಸಲ್ಲಿಸಲಿದ್ದಾರೆ ಶಶಿಭೂಷಣ ಹೆಗಡೆ

ರಾಮಕೃಷ್ಣ ಹೆಗಡೆಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ನಾಮಪತ್ರ ಸಲ್ಲಿಸಲಿದ್ದಾರೆ ಶಶಿಭೂಷಣ ಹೆಗಡೆ

SHARE

ಶಿರಸಿ: ನಾಳೆ ದಿನಾಂಕ 23-04-2018 ರಂದು ಬೆಳಿಗ್ಗೆ ೮ ಗಂಟೆಗೆ ಯಲ್ಲಾಪುರ ನಾಕಾದಲ್ಲಿ ಇರುವ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಪುತ್ಥಳಿಗೆ ಡಾ.ಶಶಿಭೂಷಣ ಹೆಗಡೆ ದೊಡ್ಮನೆ ಅವರು ಮಾಲಾರ್ಪಣೆ ಮಾಡಿ ಅಲ್ಲಿಂದ ಶಿರಸಿಯ ಮಹಾಗಣಪತಿ ದೇವಸ್ಥಾನಕ್ಕೆ 8.30 ಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದ ಶಿರಸಿಯ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮುಖಾಂತರ ತೆರಳಿ, ಜಾತ್ಯತೀತ ಜನತಾದಳ ಶಿರಸಿ_ಸಿದ್ದಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಸಂಧರ್ಭದಲ್ಲಿ ರಾಜ್ಯ ಯುವಜನತಾದಳದ ರಾಜ್ಯ ಅಧ್ಯಕ್ಷರು ಹಾಗೂ ಸೊರಬದ ಶಾಸಕರಾದ ಶ್ರೀ ಮಧು ಬಂಗಾರಪ್ಪ ಅವರು ಉಪಸ್ಥಿತವಿರುವರು, ಪಕ್ಷದ ಎಲ್ಲಾ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.