Home Important ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.59.56 ವಿದ್ಯಾರ್ಥಿಗಳು ತೇರ್ಗಡೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.59.56 ವಿದ್ಯಾರ್ಥಿಗಳು ತೇರ್ಗಡೆ

SHARE

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಒಟ್ಟಾರೆ ಶೇಕಡಾ 59.56 ಫಲಿತಾಂಶ ಬಂದಿದೆ.

ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದ್ದು(ಶೇ.91.49), ಉಡುಪಿ ಜಿಲ್ಲೆ ದ್ವಿತೀಯ(ಶೇ.90.67), ಕೊಡಗು ತೃತೀಯ(ಶೇ.83.94), ಮಡಿಕೇರಿ ನಾಲ್ಕನೇ ಸ್ಥಾನ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಕೊನೆ ಸ್ಥಾನ ಪಡೆದಿದೆ. ಎಂದು ಪಿಯು ಬೋರ್ಡ್ ನಿರ್ದೇಶಕಿ ಶಿಖಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಂದಿನಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ 6,85,713 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 4,08, 421 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 68ರಷ್ಟು, ವಾಣಿಜ್ಯ ಶೇಕಡಾ 63 ಮತ್ತು ಕಲಾ ವಿಭಾಗದಲ್ಲಿ ಶೇಕಡಾ 45ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ರಾಜ್ಯದ ಒಟ್ಟು 68 ಕಾಲೇಜುಗಳಲ್ಲಿ ಶೇಕಡಾ 100 ಫಲಿತಾಂಶ ಬಂದರೆ 118 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಕಂಡಿದೆ ಎಂದು ಪಿಯು ಮಂಡಳಿ ನಿರ್ದೇಶಕಿ ಸಿ.ಶಿಖಾ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಇಂದು ಮಧ್ಯಾಹ್ನದ 1 ಗಂಟೆ ಬಳಿಕ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಿದ್ದು, ನಾಳೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ದೊರೆಯಲಿದೆ.
ಒಟ್ಟು ಆರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 3,37,860 ಬಾಲಕಿಯರು ಮತ್ತು 3,52,292 ಬಾಲಕರು ಸೇರಿದ್ದಾರೆ.