Home Important ಬಿಜೆಪಿ ಸುನಾಮಿಗೆ ಸಿದ್ದರಾಮಯ್ಯ ಸರ್ಕಾರ ಕೊಚ್ಚಿ ಹೋಗಲಿದೆ: ಅಮಿತ್ ಶಾ

ಬಿಜೆಪಿ ಸುನಾಮಿಗೆ ಸಿದ್ದರಾಮಯ್ಯ ಸರ್ಕಾರ ಕೊಚ್ಚಿ ಹೋಗಲಿದೆ: ಅಮಿತ್ ಶಾ

SHARE

ನರಗುಂದ: ಬಿಜೆಪಿ ಸುನಾಮಿಗೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಚ್ಚಿ ಹೋಗಲಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸೋಮವಾರ ಹೇಳಿದ್ದಾರೆ.

ನರಗುಂದಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಾ, ಪ್ರಧಾನಿ ಮೋದಿ ಅವರು ಕರ್ನಾಟಕದಲ್ಲಿ ಬಿಜೆಪಿ ಅಲೆ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಹೇಳುತ್ತೇನೆ ಅದು ಬಿಜೆಪಿ ಅಲೆ ಅಲ್ಲ, ಸುನಾಮಿ. ಈ ಸುನಾಮಿಗೆ ಕಾಂಗ್ರೆಸ್ ಸರ್ಕಾರ ಕೊಚ್ಚಿ ಹೋಗಲಿದೆ ಎಂದರು.
ಕಾಂಗ್ರೆಸ್ ರಾಷ್ಟ್ರಗೀತೆಗೆ ಗೌರವ ನೀಡುವುದಿಲ್ಲ ಎಂದು ಆರೋಪಿಸಿದ ಶಾ, ಆ ಪಕ್ಷದಿಂದ ದೇಶದ ರಕ್ಷಣೆ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಸಿದ್ದರಾಮಯ್ಯ ನಿದ್ದೆ ಮಾಡುತ್ತಿದ್ದಾರೆ ಎಂದರು.
ಇದೇ ವೇಳೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಬಗೆಹರಿಸುವುದಾಗಿ ಅಮಿತ್ ಶಾ ಭರವಸೆ ನೀಡಿದರು.