Home Local ಶ್ರೀ ಶ್ರೀ ಶಿವಾನಂದ ಸ್ವಾಮಿಗಳಿಗೆ ಗೋಕರ್ಣ ಗೌರವ

ಶ್ರೀ ಶ್ರೀ ಶಿವಾನಂದ ಸ್ವಾಮಿಗಳಿಗೆ ಗೋಕರ್ಣ ಗೌರವ

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಶಿವಾನಂದ ಸ್ವಾಮಿಗಳು , ಶ್ರೀ ಶಿವಾನಂದಮಠ , ಕೊಪ್ಪಳ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 486ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಉಪಾಧಿವಂತ ಮಂಡಳಿ ಸದಸ್ಯ ವೇ ರಾಮಚಂದ್ರ ಜಂಭೆ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .