Home Important ಒಟ್ಟು 87.01 ಕೋಟಿ ರೂಪಾಯಿ ನಗದು ವಶ

ಒಟ್ಟು 87.01 ಕೋಟಿ ರೂಪಾಯಿ ನಗದು ವಶ

SHARE

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೂ 87.01 ಕೋಟಿ ರೂಪಾಯಿ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪೊಲೀಸರು ಮತ್ತು ಇತರೆ ಚುನಾವಣಾ ತಂಡಗಳು ನಡೆಸಿದ ಕಾರ್ಯಾಚರಣೆಯಲ್ಲಿ 56.36 ಕೋಟಿ ನಗದು ಪತ್ತೆಯಾಗಿದ್ದರೆ, ಆದಾಯ ತೆರಿಗೆ ಇಲಾಖೆಯ ದಾಳಿಗಳಿಂದ 30.65 ಕೋಟಿ ದೊರಕಿದೆ.

2013ರ ವಿಧಾನಸಭೆ ಚುನಾವಣೆಯಲ್ಲಿ 14.42 ಕೋಟಿ ಅಕ್ರಮ ಹಣ ಮತ್ತು 67,953 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿತ್ತು.

24.43 ಕೋಟಿ ಮೌಲ್ಯದ 5,26,766 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಇರಿಸಿಕೊಂಡಿದ್ದ ಸೀರೆಗಳು, ಲ್ಯಾಪ್‌ಟಾಪ್, ಚಿನ್ನಾಭರಣ ಸೇರಿದಂತೆ 65.48 ಕೋಟಿ ಮೌಲ್ಯದ ವಿವಿಧ ವಸ್ತುಗಳನ್ನು ಜಫ್ತಿ ಮಾಡಲಾಗಿದೆ. 44.26 ಕೋಟಿ ಮೊತ್ತದ ಚಿನ್ನ, ಬೆಳ್ಳಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

86.457 ಕೆಜಿ ತೂಕದ ಮಾದಕ ವಸ್ತುಗಳು ಪತ್ತೆಯಾಗಿದ್ದು, ಇವುಗಳ ಮೌಲ್ಯ 39 ಲಕ್ಷವಾಗಿದೆ.

ಸಿಆರ್‌ಪಿಸಿ ಸೆಕ್ಷನ್ 107ರ ಅಡಿಯಲ್ಲಿ 24,831 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಟ್ಟು 97,037 ಮಂದಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿದ್ದಾರೆ. ಇವರಲ್ಲಿ 97,031 ಮಂದಿ ಶಸ್ತ್ರಾಸ್ತ್ರಗಳನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಗೂಂಡಾ ಕಾಯ್ದೆಯಡಿ 17 ಪ್ರಕರಣಗಳನ್ನು ದಾಖಲಿಸಲಾಗಿದೆ.

ಅಬಕಾರಿ ಇಲಾಖೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಒಟ್ಟು 13,900 ಪ್ರಕರಣಗಳು ದಾಖಲಾಗಿವೆ ಎಂದು ಚುನಾವಣಾ ಆಯೋಗದ ಮಾಹಿತಿ ತಿಳಿಸಿದೆ.