Home Local ಪ ಪೂ ಶ್ರೀ ಶ್ರೀ ಪರಶುರಾಮ ಮಹಾಸ್ವಾಮಿಗಳಿಗೆ ಗೋಕರ್ಣ ಗೌರವ.

ಪ ಪೂ ಶ್ರೀ ಶ್ರೀ ಪರಶುರಾಮ ಮಹಾಸ್ವಾಮಿಗಳಿಗೆ ಗೋಕರ್ಣ ಗೌರವ.

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಪರಶುರಾಮ ಮಹಾಸ್ವಾಮಿಗಳು , ಆದಿಶಕ್ತಿಪೀಠ, ಹುಕ್ಕೇರಿ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 491ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಯಕ್ಷಗಾನ ಭಾಗವತರಾದ ಶ್ರೀ ರಾಘವೇಂದ್ರ ಮಯ್ಯ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .