Home Important ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಇನ್ನು ಕೆಲವೇ ಹೊತ್ತುಗಳು ಬಾಕಿಯಿವೆ!

ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಇನ್ನು ಕೆಲವೇ ಹೊತ್ತುಗಳು ಬಾಕಿಯಿವೆ!

SHARE

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಇನ್ನು ಕೆಲವೇ ಹೊತ್ತುಗಳು ಬಾಕಿಯಿವೆ.

ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕಾರಕ್ಕೆ ಮುನ್ನ ಯಡಿಯೂರಪ್ಪನವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ದೇವಾಲಯದಲ್ಲಿ ಈಗಾಗಲೇ ಯಡಿಯೂರಪ್ಪ ಆಗಮನ ಹಿನ್ನೆಲೆಯಲ್ಲಿ ಹೂಗಳ ಅಲಂಕಾರ ಮತ್ತು ಸಕಲ ಸಿದ್ದತೆ ಮಾಡಲಾಗುತ್ತಿದೆ. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಇನ್ನೊಂದೆಡೆ ಯಡಿಯೂರಪ್ಪ ನಿವಾಸ ಬೆಂಗಳೂರಿನ ಡಾಲರ್ಸ್ ಕಾಲನಿಯ ಧವಳಗಿರಿಯಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕಳೆದ ಮಧ್ಯರಾತ್ರಿಯಿಂದ ಪೊಲೀಸ್ ಸಿಬ್ಬಂದಿ ಕಾವಲು ಕಾಯುತ್ತಿದ್ದು ನಿವಾಸದ ಗೇಟ್ ಬಳಿ ಮೆಟಲ್ ಡಿಟೆಕ್ಟರ್ ನ್ನು ಅಳವಡಿಸಲಾಗಿದೆ.

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕಚೇರಿಯಲ್ಲಿ ನಾಮಫಲಕವನ್ನು ಬದಲಿಸಲು ವ್ಯವಸ್ಥೆ ಮಾಡಲಾಗುತ್ತಿದೆ.