Home ಸ್ಥಳೀಯ ಪ ಪೂ ಶ್ರೀ ಶ್ರೀ ವಿಜಯಸಿದ್ಧೇಶ್ವರ ಸ್ವಾಮೀಜಿಯವರಿಗೆ ಗೋಕರ್ಣ ಗೌರವ

ಪ ಪೂ ಶ್ರೀ ಶ್ರೀ ವಿಜಯಸಿದ್ಧೇಶ್ವರ ಸ್ವಾಮೀಜಿಯವರಿಗೆ ಗೋಕರ್ಣ ಗೌರವ

SHARE

ಗೋಕರ್ಣ:ಪ ಪೂ ಶ್ರೀ ಶ್ರೀ ವಿಜಯಸಿದ್ಧೇಶ್ವರ ಸ್ವಾಮೀಜಿ , ಶ್ರೀ ಮಹಾಂತಲಿಂಗೇಶ್ವರಮಠ , ಗೋಕಾಕ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 494ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .