Home Information ಮೇ 23 ರಂದು ಕಾರವಾರದಲ್ಲಿ ಕ್ಯಾಂಪಸ್ ಇಂಟರವ್ಯೂ! ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣ ಅವಕಾಶ

ಮೇ 23 ರಂದು ಕಾರವಾರದಲ್ಲಿ ಕ್ಯಾಂಪಸ್ ಇಂಟರವ್ಯೂ! ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣ ಅವಕಾಶ

SHARE

ಕಾರವಾರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 23 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಾರವಾರ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿವಿಧ ಖಾಸಗಿ ಕಂಪನಿಗಳು ಸಂದರ್ಶನ(ಆಫ್ ಕ್ಯಾಂಪಸ್ ಇಂಟರವ್ಯೂ) ನಡೆಸಲಿವೆ.

ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು 2 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9481403800, 9481274298 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.