Home Important ಆತ್ಮಹತ್ಯೆಗೆ ಶರಣಾದ ಹೋಮ್ ಗಾರ್ಡ: ವೈರಲ್ ಆಯ್ತು ದ್ರಶ್ಯ!

ಆತ್ಮಹತ್ಯೆಗೆ ಶರಣಾದ ಹೋಮ್ ಗಾರ್ಡ: ವೈರಲ್ ಆಯ್ತು ದ್ರಶ್ಯ!

SHARE

ಬೆಂಗಳೂರು: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಹಲಸೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಗೃಹರಕ್ಷಕ ಸಿಬ್ಬಂದಿಯೊಬ್ಬ ವಿಷದ ಮಾತ್ರೆಗಳನ್ನು ನುಂಗುವ ದೃಶ್ಯವನ್ನು ಚಿತ್ರೀಕರಣ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಮೂಡಚಿಂತಲಹಳ್ಳಿಯಲ್ಲಿ ನಡೆದಿದೆ.

ಮೂಡಚಿಂತಲಹಳ್ಳಿ ಸುನಿಲ್ ಕುಮಾರ್ ಜಿ.(21) ಆತ್ಮಹತ್ಯೆ ಮಾಡಿಕೊಂಡಿರುವ ಗೃಹರಕ್ಷಕ ಸಿಬ್ಬಂದಿಯಾಗಿದ್ದಾನೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೋಂಗಾರ್ಡ್ ಆಗಿದ್ದ ಸುನಿಲ್ ಕುಮಾರ್.ಜಿ ರಜೆಯ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರೇಮ ವೈಫಲ್ಯದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಯಾವುದೇ ಪತ್ರ ಪತ್ತೆಯಾಗಿಲ್ಲ. ಸಾವಿಗೂ ಮೊದಲು ತಾನೇ ಸ್ವತಃ ಮಾತ್ರೆ ಸೇವಿಸುವ ದೃಶ್ಯಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.