Home Important *ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ವಿಶ್ವ ಪರಿಸರ ದಿನಾಚರಣೆ*

*ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ವಿಶ್ವ ಪರಿಸರ ದಿನಾಚರಣೆ*

SHARE

ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆಯೊಂದಿಗೆ ಆಚರಿಸಲಾಯಿತು. ಶಾಲಾ ಪರಿಸರದಲ್ಲಿ ಜೈವ ವೈವಿಧ್ಯ ಉದ್ಯಾನವನವನ್ನು ಇನ್ನಷ್ಟು ಬೆಳೆಸಲು ಔಷಾಧೀಯ ಗುಣವುಳ್ಳ ಗಿಡಗಳನ್ನು ಶಾಲಾ ವ್ಯವಸ್ಥಾಪಕರಾದ ಶ್ರೀ ಯನ್ ಶಂಕರನಾರಾಯಣ ಭಟ್ ನೇರೋಳು ಸಸಿಗಳನ್ನು ನೆಡುವುದರೊಂದಿಗೆ, ಪರಿಸರ ಸಂರಕ್ಷಣೆ ಮಹತ್ವವನ್ನು ಶಾಲಾ ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್ ನೇರೋಳು ಇವರು ವಿಧ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ಶಿಕ್ಷಕರು ಮತ್ತು ಶಿಕ್ಷಕೇತರ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶಾಲಾ ಹಿಂದಿ ಮತ್ತು ಕನ್ನಡ ಸಂಘ ವತಿಯಿಂದ ಪರಿಸರ ಮಹತ್ವವನ್ನು ಸಾರುವ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಲಾಯಿತು.