Home Information ದಾಂಡೇಲಿಯಲ್ಲಿ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾಂಡೇಲಿಯಲ್ಲಿ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

SHARE

ಕಾರವಾರ: ಕೆನರಾ ವೃತ್ತ ದಾಂಡೇಲಿ ವನ್ಯಜೀವಿ ವಿಭಾಗದಲ್ಲಿ ಖಾಲಿಯಿರುವ ಐದು ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಜಿಯನ್ನು ಆನ್‍ಲೈನ್ ಮೂಲಕ 11-06-2018ದಿಂದ 10-07-2018 ಸಂಜೆ 4ರೊಳಗೆ ಸಲ್ಲಿಸಬಹುದಾಗಿದೆ.

ಈ ಕುರಿತ ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್ www.aranya.gov.in ಇಲ್ಲಿ ಪಡೆಯಬಹುದಾಗಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಕೆನರಾ ವೃತ್ತ ಅವರ ಪ್ರಕಟಣೆ ತಿಳಿಸಿದೆ.