Home Important ಪುಲ್ವಾಮದಲ್ಲಿ ಉಗ್ರರ ದಾಳಿ; ಇಬ್ಬರು ಪೊಲೀಸರು ಸಾವು

ಪುಲ್ವಾಮದಲ್ಲಿ ಉಗ್ರರ ದಾಳಿ; ಇಬ್ಬರು ಪೊಲೀಸರು ಸಾವು

SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಕೋರ್ಟ್‌ ಕಟ್ಟಡದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ.

ಕೊರ್ಟ್ ಆವರಣದೊಳಗೆ ನುಗ್ಗಿದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೋಲಿಸರನ್ನು ನಿಯೋಜಿಸಲಾಗಿದ್ದು, ಕೋರ್ಟ್ ಆವರಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮತ್ತೊಂದೆಡೆ ಅನಂತನಾಗ್ ಜಿಲ್ಲೆಯ ಸದಾರ್ ಎಂಬಲ್ಲಿ ಮಂಗಳವಾರ ಬೆಳಿಗ್ಗೆ 3 ಗಂಟೆ ಸಮಯದಲ್ಲಿ ನಡೆದ ಉಗ್ರರ ಪ್ರತ್ಯೇಕ ದಾಳಿಯಲ್ಲಿ 10 ಸಿಆರ್‌ಪಿಎಫ್‌ ಯೋಧರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅನಂತ್ನಾಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.