Home Local ಶ್ರೀ ಶ್ರೀ ನಿರಂಜನ ಮಾತಾಜಿಯವರಿಗೆ ಗೋಕರ್ಣ ಗೌರವ

ಶ್ರೀ ಶ್ರೀ ನಿರಂಜನ ಮಾತಾಜಿಯವರಿಗೆ ಗೋಕರ್ಣ ಗೌರವ

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ನಿರಂಜನ ಮಾತಾಜಿ , ಶ್ರೀ
ರಾಮರೂಢಮಠ , ಬಾಗಲಕೋಟ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 527ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಶ್ರೀಮತಿ ಅನುಪಮಾ ಪ್ರಶಾಂತ ಹಿರೇಗಂಗೆ ಗೋಕರ್ಣ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .