Home Local ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಶಿರಾಲಿಯ ಶಿಕ್ಷಕಿ.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಶಿರಾಲಿಯ ಶಿಕ್ಷಕಿ.

SHARE

ಭಟ್ಕಳ: ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ತಾಲೂಕಿನ ಶಿರಾಲಿ ಬಳಿಯ ಚಿತ್ರಾಪುರದಲ್ಲಿ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಶೋಭಾ ಮಾದೇವ ನಾಯ್ಕ ಎಂದು ಗುರುತಿಸಲಾಗಿದೆ.

ದೆಹಲಿಯಿಂದ ಕೇರಳಕ್ಕೆ ಹೋಗುವ ಮಂಗಳಾ ಎಕ್ಸ್​ಪ್ರೆಸ್​ ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶೋಭಾ ಶಿರಾಲಿಯ ಸೆಂಟ್​ ಥೋಮಸ್​​ ಶಾಲೆಯಲ್ಲಿ ಕಂಪ್ಯೂಟರ್​​ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ನಿನ್ನೆ ರಾತ್ರಿ 8 ಗಂಟೆಯಿಂದ ಮೃತ ಯುವತಿ ಮನೆಯಿಂದ ನಾಪತ್ತೆಯಾಗಿದ್ದಳು ಎಂದು ಪೋಷಕರು ತಿಳಿಸಿದ್ದಾರೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಯ ನಂತರದಲ್ಲಿ ಸಾವಿಗೆ ಕಾರಣ ತಿಳಿಯಬೇಕಿದೆ.