Home Local ನಾಳೆ ಹೊನ್ನಾವರದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ನಾಳೆ ಹೊನ್ನಾವರದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

SHARE

ಹೊನ್ನಾವರ : ಮುಂಬರುವ ಲೋಕಸಭೆ, ಪಟ್ಣಣ ಪಂಚಾಯತ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಅನುಭವಿಸಿದ ಸೋಲಿನ ಕುರಿತು ಪರಾಮರ್ಶಿಸಿ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಬರುವ ಗುರುವಾರ ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ.

ಮುಂಜಾನೆ 10:30 ಗಂಟೆಗೆ ನಗರದ ಕೆ.ಡಿ.ಸಿ.ಸಿ.ಬ್ಯಾಂಕ್ ಹತ್ತಿರವಿರುವ ಸೊಶಿಯಲ್ ಕ್ಲಬ್ ಸಭಾಭವನದಲ್ಲಿ ಸಭೆ ನಡೆಯಲಿದ್ದು ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ .

ಕಾರಣ ಪಕ್ಷದ ಹಿರಿಯ,ಕಿರಿಯ ಮುಖಂಡರುಗಳು, ಬೂತ್ ಮಟ್ಟದ ಕಾರ್ಯಕರ್ತರುಗಳು ಮತ್ತು ವಿವಿಧ ಸೆಲ್‍ಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯ ಸÀಲಹೆ-ಸೂಚನೆ ನೀಡುವಂತೆ ಹೊನ್ನಾವರದ ಬ್ಲಾಕ್ ಕಾಂಗ್ರೆsಸ್À ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.