Home Local ಅಭಿನವ ಜಾತವೇದಮುನಿ ಶಿವಾಚಾರ್ಯ ಸ್ವಾಮೀಜಿಯವರಿಗೆ ಗೌರವ

ಅಭಿನವ ಜಾತವೇದಮುನಿ ಶಿವಾಚಾರ್ಯ ಸ್ವಾಮೀಜಿಯವರಿಗೆ ಗೌರವ

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಅಭಿನವ ಜಾತವೇದಮುನಿ ಶಿವಾಚಾರ್ಯ ಸ್ವಾಮೀಜಿ , ಶ್ರೀ ಸಾರಂಗಮಠ , ಸುಕ್ಷೇತ್ರ ಕೂಡಲಸಂಗಮ , ಬಾಗಲಕೋಟ ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 558ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ , ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಸಿಂಡಿಕೇಟ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಮಲ್ಲಿಕಾರ್ಜುನ ರಾವ್ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು .ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿ ಸದಸ್ಯರು, ಮತ್ತು ಸಿಂಡಿಕೇಟ್ ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು . ವೇ ರಾಮಚಂದ್ರ ಭಟ್ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .