Home Local ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳು ಪೊಲೀಸರ ವಶಕ್ಕೆ.

ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳು ಪೊಲೀಸರ ವಶಕ್ಕೆ.

SHARE

ಗೋಕರ್ಣ: ಅಕ್ರಮವಾಗಿ ಸಾಗಿಸುತ್ತಿದ್ದ 23 ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಲಹೊಂಗಲದಿಂದ ಕೇರಳದ ಕಾಸರಗೋಡಿಗೆ ಸಾಗಿಸುತ್ತಿದ್ದ ಎಮ್ಮೆ ಮತ್ತು ಕೋಣಗಳನ್ನು ಸಾಗಿಸಲಾಗುತ್ತಿತ್ತು. ಜಾನುವಾರುಗಳನ್ನು ಸಾಗಿಸುತ್ತಿದ್ದ ಗೋವಾ ನೋಂದಣಿಯ ಲಾರಿ ಮತ್ತು ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬೆಳಗಾವಿ ಜಿಲ್ಲೆಯ ಬೈಲಹೊಂಗಲದಿಂದ ಕೇರಳದ ಕಾಸರಗೋಡಿನ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಲಾರಿ ಸಮೇತ ವಶಕ್ಕೆ ಪಡೆದಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದು,ಈ ಘಟನೆ ಹಿರೇಗುತ್ತಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

ಜಾನುವಾರುಗಳನ್ನು ಸಾಗಿಸು ತ್ತಿದ್ದ ಗೋವಾ ನೋಂದಣಿ ಹೊಂದಿರುವ ಲಾರಿಯನ್ನು ಮತ್ತು ನಾಲ್ವರು ಆರೋಪಿಗಳ ನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.