Home Local ಶ್ರೀ ಶ್ರೀ ಬ್ರಹ್ಮ ಚೈತನ್ಯ ಸ್ವಾಮೀಜಿಯವರಿಗೆ ಗೋಕರ್ಣ ಗೌರವ

ಶ್ರೀ ಶ್ರೀ ಬ್ರಹ್ಮ ಚೈತನ್ಯ ಸ್ವಾಮೀಜಿಯವರಿಗೆ ಗೋಕರ್ಣ ಗೌರವ

SHARE

ಗೋಕರ್ಣ: ಪ ಪೂ ಶ್ರೀ ಶ್ರೀ ಬ್ರಹ್ಮ ಚೈತನ್ಯ ಸ್ವಾಮೀಜಿ , ಅಚಲ ಆಶ್ರಮ, ಬೆಂಗಳೂರು ಇವರು ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 570ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ , ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು .

ಶ್ರೀ ದೇವಾಲಯದ ಪರವಾಗಿ ಬೆಂಗಳೂರಿನ ಉದ್ಯಮಿ ಶ್ರೀ ಎ ಎಸ್ ನಾಗರಾಜೇ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಭಟ್ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .