Home Local ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸಲು ಅಧಿಕಾರಿಗಳ ಹರಸಾಹಸ.

ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸಲು ಅಧಿಕಾರಿಗಳ ಹರಸಾಹಸ.

SHARE

ಕಾರವಾರ :ಜಿಲ್ಲೆಯಲ್ಲಿಅಧಿಕಾರಿಗಳು ದಾಳಿ ನಡೆಸಿ ಟನ್‌ಗಟ್ಟಲೆ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳುತ್ತಿದ್ದಾರೆ. ಆದರೆ ಇನ್ನೊಂದೆಡೆ ಪ್ಲಾಸ್ಟಿಕ್‌ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಜನರಲ್ಲಿ ಅರಿವು ಮೂಡಿಸುವಲ್ಲಿ ಸರಕಾರ ವಿಫಲವಾಗುತ್ತಿರುವುದೇ ಇದಕ್ಕೆ ಕಾರಣ ಎಂಬುದು ಪರಿಸರ ಪ್ರಿಯರ ಆರೋಪ. ಪರಿಸರಕ್ಕೆ ಮಾರಕವಾಗುತ್ತಿರುವ ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸಲು ಅಧಿಕಾರಿಗಳು ಹರಸಾಹಸಪಡುವಂತಾಗಿದೆ.
ಕಟ್ಟು ನಿಟ್ಟಿನ ನಿಯಮಗಳಿದ್ದರೂ ಪ್ಲಾಸ್ಟಿಕ್‌ ಬಳಕೆ ನಿಂತಿಲ್ಲ. ಕಳೆದ ಆರು ತಿಂಗಳಲ್ಲಿ ಜಿಲ್ಲೆಯಲ್ಲಿ ಅಧಿಕಾರಿಗಳು ಒಟ್ಟು 152 ಕಡೆ ದಾಳಿ ನಡೆಸಿ 8.95 ಟನ್‌ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ವಶಪಡಿಸಿಕೊಂಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಪರಿಸರ ಪ್ರಿಯರು ಕೂಡ ಪ್ಲಾಸ್ಟಿಕ್‌ ಬಳಸದಂತೆ ಜನಜಾಗೃತಿ ಮೂಡಿಸಲು ಯತ್ನಿಸುತ್ತಲೇ ಇದ್ದಾರೆ. ಇದರ ನಡುವೆಯೂ ಪ್ಲಾಸ್ಟಿಕ್‌ ತ್ಯಾಜ್ಯ ಹೆಚ್ಚತೊಡಗಿರುವುದು ಆತಂಕಕಾರಿ ಸಂಗತಿಯಾಗಿದೆ. ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸಲು ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಸರಕಾರ ಇನ್ನುಷ್ಟು ಪರಿಣಾಮಕಾರಿಯಾಗಿಸಬೇಕಿದೆ. ಮಾಲಿನ್ಯ ನಿಯಂತ್ರಣದ ನಿಟ್ಟಿನಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕಿದೆ ಎಂದು ಪರಿಸರವಾದಿಗಳು ಹೇಳುತ್ತಾರೆ.