Home Information ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕಕ್ಕೆ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿ.

ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕಕ್ಕೆ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿ.

SHARE

ಕರ್ನಾಟಕ ಸರ್ಕಾರವು ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕಕ್ಕೆ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 45
ಹುದ್ದೆಗಳ ವಿವರ

ಗ್ರಾಮ ಲೆಕ್ಕಿಗರ ಹುದ್ದೆ
ವಿದ್ಯಾರ್ಹತೆ : ಪಿಯುಸಿ ಅಥವಾ ಇದಕ್ಕೆ ಸಮನಾದ ಸಿಬಿಎಸ್’ಸಿ, ಐಸಿಎಸ್’ಇ ನಡೆಸುವ 12ನೇ ತರಗತಿಯಲ್ಲಿ ಪಾಸಾಗಿರಬೇಕು. ಕಡ್ಡಾಯವಾಗಿ ಕಂಪೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ : ಕನಿಷ್ಠ ವಯೋಮಿತಿಯನ್ನು 18 ವರ್ಷಕ್ಕೆ ನಿಗದಿ ಪಡಿಸಲಾಗಿದೆ. ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ,2ಬಿ,3ಎ,3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿ ಮಾಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗ, 2ಎ,2ಬಿ,3ಎ,3ಬಿ ವರ್ಗದವರಿಗೆ 300 ರೂ, ಪ.ಜಾ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 150 ರೂ ಶುಲ್ಕ ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-08-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.chickmagalur.nic.in ಗೆ ಭೇಟಿ ನೀಡಿ.