Home Information ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿಗೆ ಅರ್ಜಿ ಆಹ್ವಾನ

ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿಗೆ ಅರ್ಜಿ ಆಹ್ವಾನ

SHARE

ಕಾರವಾರ:ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿಗೆ ಅರ್ಜಿ ಆಹ್ವಾನ ಅವಧಿ ವಿಸ್ತರಣೆ ಮಾಡಲಾಗಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತ ಬರುತ್ತಿದೆ. ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದೆ.

ಈ ದಿಸೆಯಲ್ಲಿ ಮಾಧ್ಯಮ ಕಚೇರಿಗಳ ಸಹಕಾರವನ್ನು ಪಡೆದು ಪತ್ರಕರ್ತರ ಕೌಶಲ್ಯಾಭಿವೃದ್ಧಿ ತರಬೇತಿ ಹಮ್ಮಿಕೊಳ್ಳುವುದು ಅಕಾಡೆಮಿ ರೂಪಿಸಿರುವ ಹೊಸ ಯೋಜನೆಯಾಗಿದೆ.
ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಮುಗಿಸಿ ಹೊರ ಬರುವ ಅಭ್ಯರ್ಥಿಗಳಿಗೆ ಮಾಧ್ಯಮ ಕಚೇರಿಯ ಎಲ್ಲಾ ವಿಭಾಗಗಳಲ್ಲಿ ತರಬೇತಿಯನ್ನು ಕೊಡಿಸುವ ಮೂಲಕ ತರಬೇತಿ ಹೊಂದಿದ ಪತ್ರಕರ್ತರಾಗುವಂತೆ ಸಿದ್ಧಪಡಿಸುವುದು ಅಕಾಡೆಮಿಯ ಉದ್ದೇಶವಾಗಿದೆ.

ಪ್ರಸಕ್ತ ವರ್ಷದಲ್ಲಿ ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿಯಲ್ಲಿ 4 ಮಂದಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ಮತ್ತು ಹಿಂದುಳಿದ ವರ್ಗಗಳ 2 ಮಂದಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ (ಒಟ್ಟು 6 ಮಂದಿ) ಪ್ರಮುಖ ದಿನಪತ್ರಿಕೆ / ಎಲೆಕ್ಟ್ರಾನಿಕ್ ಮಾಧ್ಯಮಗಳ ಕಚೇರಿಯಲ್ಲಿ 10 ತಿಂಗಳ ಕಾಲ ತರಬೇತಿ ಕೊಡಿಸಲು ಉದ್ದೇಶಿಸಲಾಗಿದೆ. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ತಲಾ ರೂ. 20,000/- (ಇಪ್ಪತ್ತು ಸಾವಿರ ರೂಪಾಯಿಗಳು ಮಾತ್ರ) ಗಳ ಶಿಷ್ಯ ವೇತನ ನೀಡಲಾಗುವುದು.

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 ವರ್ಷ ಒಳಗಿನ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಸ್ವವಿವರ, ವಿದ್ಯಾರ್ಹತೆ ಪತ್ರಗಳು, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಛಾಯಾಚಿತ್ರಗಳನ್ನು ಸ್ಕ್ಯಾನ್ ಮಾಡಿ ಇಮೇಲ್ ವಿಳಾಸ, ದೂರವಾಣಿ ಸಂಖ್ಯೆ traineekma@gmail.com ಮೂಲಕ ಅಥವಾ ಅಂಚೆ ಮೂಲಕ ದಿನಾಂಕ: 31-08-2018ರ ಒಳಗಾಗಿ ಕಳುಹಿಸಲು ಕೋರಿದೆ. ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಲ್ಪಟ್ಟವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.