Home Local ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಧಾಕೃಷ್ಣ ಭಟ್ಟ ಅವಿರೋಧ ಆಯ್ಕೆ.

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಧಾಕೃಷ್ಣ ಭಟ್ಟ ಅವಿರೋಧ ಆಯ್ಕೆ.

SHARE

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2018-2021ರ ಅವಧಿಗೆ ನಡೆದ ಚುನಾವಣೆಯಲ್ಲಿ ರಾಧಾಕೃಷ್ಣ ಭಟ್ಟ ಇವರು ಅಧ್ಯಕ್ಷರಾಗಿ, ನರಸಿಂಹ ಅಡಿ ಶಿರಸಿ ಇವರು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸದಸ್ಯರಾಗಿ ಜಿ. ಸುಬ್ರಾಯ ಭಟ್ ಬಕ್ಕಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಆರ್. ವಿ. ಭಾಗ್ವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಧಾಕೃಷ್ಣ ಭಟ್ಟ ಇವರು ಮೂರು ದಶಕಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು 1993ರಿಂದ ನಿರಂತರವಾಗಿ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ರಾಜ್ಯ ಸಮಿತಿ ಸದಸ್ಯರಾಗಿ, ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಕಾರ್ಯನಿರ್ವಹಿಸಿದವರು.

ಉಪಾಧ್ಯಕ್ಷರಾಗಿ ಬಸವರಾಜ ಪಾಟೀಲ ಮುಂಡಗೋಡ, ಅನಂತ ದೇಸಾಯಿ ಜೊಯಿಡಾ, ಖಜಾಂಚಿಯಾಗಿ ಸುಮಂಗಲಾ ಹೊನ್ನೆಕೊಪ್ಪ ಶಿರಸಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೃಷ್ಣಮೂರ್ತಿ ಹೆಬ್ಬಾರ್ ಹೊನ್ನಾವರ, ಗಂಗಾಧರ ಕೊಳಗಿ ಸಿದ್ದಾಪುರ, ಫಯ್ಯಾಜ್ ಮುಲ್ಲಾ ಭಟ್ಕಳ, ರಾಜೇಂದ್ರ ಹೆಗಡೆ ಶಿರಸಿ, ಭವಾನಿಶಂಕರ ನಾಯ್ಕ, ಯಶ್ವಂತ ನಾಯ್ಕ ಶಿರಸಿ, ಜೆ. ಆರ್. ಸಂತೋಷಕುಮಾರ ಶಿರಸಿ, ಎಂ.ಆರ್.ಮಾನ್ವಿ, ಭಟ್ಕಳ ಇವರುಗಳು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.