Home Information ಸಚಿವ ಸಂಪುಟಸಭೆಯಲ್ಲಿ ರೈತರಸಾಲ ಮನ್ನಾಕ್ಕೆ ಒಪ್ಪಿಗೆ ಸೂಚನೆ.

ಸಚಿವ ಸಂಪುಟಸಭೆಯಲ್ಲಿ ರೈತರಸಾಲ ಮನ್ನಾಕ್ಕೆ ಒಪ್ಪಿಗೆ ಸೂಚನೆ.

SHARE

ಬೆಂಗಳೂರು : ನಿನ್ನೆ ನಡೆದ ಸಚಿವ ಸಂಪುಟಸಭೆಯಲ್ಲಿ ರೈತರಸಾಲ ಮನ್ನಾಕ್ಕೆ ಒಪ್ಪಿಗೆ ದೊರೆತಿದೆ . ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಘೋಷಿಸಿದ್ದ ಸಹಕಾರಿ ಬ್ಯಾಂಕ್‌ಗಳಲ್ಲಿನ ಎಲ್ಲಾ ರೈತರ ಒಂದು ಲಕ್ಷ ರು.ವರೆಗಿನ ಚಾಲ್ತಿ ಸಾಲವನ್ನು ಮನ್ನಾ ಮಾಡಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದ್ದು, ಸಹಕಾರಿ ಬ್ಯಾಂಕ್‌ಗಳಿಂದ ರೈತರಿಗೆ ನೀಡಿರುವ 10,734 ಕೋಟಿ ರು. ಸಾಲದ ಪೈಕಿ 9,448 ಕೋಟಿ ರು. ಮನ್ನಾ ಆಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.

2018ರ ಜುಲೈ 10ರವರೆಗೆ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಹೊಂದಿರುವ ಎಲ್ಲಾ ರೀತಿಯ ಅಲ್ಪಾವಧಿ ಬೆಳೆ ಸಾಲವು ಒಂದು ಲಕ್ಷ ರು.ವರೆಗೆ ಮನ್ನಾ ಆಗಲಿದೆ ಹಾಗೂ ಜುಲೈ 10ರ ಬಳಿಕ ರೈತರು ಸಾಲ ಮರುಪಾವತಿ ಮಾಡಿದ್ದರೆ ಸಂಬಂಧಪಟ್ಟಮೊತ್ತ ಅವರ ಉಳಿತಾಯ ಖಾತೆಗೆ ವರ್ಗಾವಣೆಯಾಗಲಿದೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಮಾದ್ಯಮದವರಿಗೆ ಹೇಳಿದ್ದಾರೆ